ಡಿ.ದೇವರಾಜ ಅರಸು ೯೭ನೇ ಜನ್ಮ ದಿನಾಚರಣೆ

Digg This
Share on Myspace

ಬೆಂಗಳೂರು: ಆ. ೧೮ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ  ೯೭ನೇ ಜನ್ಮ ದಿನಾಚರಣೆಯ ಅಂಗವಾಗಿ  ಆಗಸ್ಟ್ ೨೦ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಡಿ.ದೇವರಾಜ ಅರಸು ಪ್ರತಿಮೆಗೆ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ಅವರು ಮಾಲಾರ್ಪಣೆ ಮಾಡುವರು. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಶ್ರೀ ಕೆ.ಎಸ್.ಈಶ್ವರಪ್ಪ ಮತ್ತು  ಶ್ರೀ ಆರ್.ಅಶೋಕ್, ಸಮಾಜ ಕಲ್ಯಾಣ ಹಾಗೂ ಬಂದೀಖಾನೆ ಸಚಿವ  ಶ್ರೀ ಎ.ನಾರಾಯಣಸ್ವಾಮಿಯವರು ಭಾಗವಹಿಸುವರು. ಬೆಳಿಗ್ಗೆ ೧೧.೦೦ ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ   ಶ್ರೀ ಜಗದೀಶ್ ಶೆಟ್ಟರ್ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವಾಲಯದ ಉದ್ಘಾಟನೆ  ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡುವರು. ಸಮಾಜ ಕಲ್ಯಾಣ ಹಾಗೂ ಬಂದೀಖಾನೆ ಸಚಿವ  ಶ್ರೀ ಎ.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸುವರು. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ  ಶ್ರೀ ಕೆ.ಎಸ್.ಈಶ್ವರಪ್ಪ, ಶ್ರೀ ಆರ್.ಅಶೋಕ್, ಮಾನ್ಯ ಸಚಿವರುಗಳು,  ವಿಧಾನಸಭಾಧ್ಯಕ್ಷರು ಮತ್ತು ವಿಧಾನ ಪರಿಷತ್ ಸಭಾಪತಿಗಳು ಮತ್ತಿತರ ನಾಯಕರುಗಳು, ಪ್ರಮುಖರು ಭಾಗವಹಿಸುವರು.

 

 

 

Comments are closed

FEATURED LINKS